ಬೆಂಗಳೂರು : ನೀವು ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ ಪಡೆದಿದ್ದೀರಾ? ಸರ್ಕಾರದ ಉದ್ಯೋಗವನ್ನು ಹುಡುಕುತ್ತಿದ್ದೀರಾ? ಹಾಗಾದರೆ, ನಿಮ್ಮ ಕನಸು ನನಸು ಮಾಡಿಕೊಳ್ಳಲು ಹೊಸ ಅವಕಾಶದ ಬಾಗಿಲು ತೆರೆದಿದೆ. ಹೌದು, ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ 66 ಹುದ್ದೆಗಳ ನೇಮಕಾತಿಗಾಗಿ (KRCL Recruitment 2026) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇ-ಮೇಲ್ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಹುದ್ದೆಗಳ ವಿವರ ಈ ಕೆಳಗಿನಂತಿದೆ.
ಹುದ್ದೆಗಳ ವಿವರ
ಸಂಸ್ಥೆ ಹೆಸರು : ಕೊಂಕಣ ರೈಲ್ವೆ ಕಾರ್ಪೋರೇಷನ್ ಲಿಮಿಟೆಡ್
ಒಟ್ಟು ಹುದ್ದೆ : 66
ಹುದ್ದೆ ಹೆಸರು: ಅಸಿಸ್ಟಂಟ್ ಲೋಕೊ ಪೈಲಟ್ ಇತ್ಯಾದಿ
ಉದ್ಯೋಗ ಸ್ಥಳ : ಕರ್ನಾಟಕ ಸೇರಿ ಹಲವೆಡೆ
ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 19
ಅಸಿಸ್ಟಂಟ್ ಲೋಕೊ ಪೈಲಟ್ ಹಾಗೂ ಸೀನಿಯರ್ ಲೋಕೊ ಪೈಲಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕದ ಸುರತ್ಕಲ್, ಗೋವಾ, ಮಹಾರಾಷ್ಟ್ರದ ರತ್ನಗಿರಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಪದವಿ, ಡಿಪ್ಲೋಮಾ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರಿಗೆ 45 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ konkanrailway.com ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಭರ್ತಿ ಮಾಡಿದ ಅರ್ಜಿ ಹಾಗೂ ದಾಖಲೆಗಳ ಸಾಫ್ಟ್ ಕಾಪಿಗಳನ್ನು spo.gnandeep@krcl.co.in ಗೆ ಮೇಲ್ ಮಾಡಬೇಕು
ಇದನ್ನೂ ಓದಿ :2027ರ ಏಕದಿನ ವಿಶ್ವಕಪ್ ರೇಸ್‌ನಲ್ಲಿ ರವೀಂದ್ರ ಜಡೇಜಾ : ಬೌಲಿಂಗ್ ಕೋಚ್ ಮಹತ್ವದ ಹೇಳಿಕೆ!



















