ಮಂಗಳೂರು : ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಸಂಸ್ಥೆಯಲ್ಲಿ ಭೀಕರ ಸ್ಪೋಟದ ಸಂಭವಿಸಿದಿದ್ದು, ದಟ್ಟ ಹೊಗೆ, ಬೆಂಕಿ ಆವರಿಸಿಕೊಂಡಿದೆ.
ಸ್ಫೋಟದ ತೀವ್ರತೆಗೆ ಸಮೀಪದಲ್ಲಿರುವ ಮಂಗಳೂರು ವಿಮಾನ ನಿಲ್ದಾಣದ ಗಾಜುಗಳು ಪುಡಿಪುಡಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಎಂಆರ್‌ಪಿಎಲ್‌ನ ಸಿಎಸ್‌ಟಿ ಘಟಕದಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸುತ್ತಮುತ್ತಲಿನ ವಸತಿ ಪ್ರದೇಶಗಳಿಗೆ ಹಾಗೂ ಕಿಲೋ ಮೀಟರ್ ಗಟ್ಟಲೆ ಏರಿಯಾಗಳಲ್ಲಿ ಭೂಮಿ ನಡುಗಿದ ಅನುಭವವಾಗಿದೆ. ಕಾರ್ಖಾನೆಯ ಒಳಗಡೆಯೇ ಭಾರೀ ಪ್ರಮಾಣದ ಸ್ಪೋಟ ಸಂಭವಿಸಿರಬಹುದು ಎಂದು ಸ್ಥಳೀಯರು ಶಂಕಿಸಿದ್ದಾರೆ. ಪೈಪ್‌ಲೈನ್ ಒಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.
ವಿಷಯ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಘಟನೆಯಲ್ಲಿ ಸಾವು ನೋವುಗಳಾಗಿರುವ ಮತ್ತು ಈ ಸ್ಫೋಟಕ್ಕೆ ನಿಖರ ಕಾರಣಗಳು ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಇದನ್ನೂ ಓದಿ : ಛಂಬಲ್ ಕಣಿವೆಯ ಬಂಡುಕೋರನ ಮೊಮ್ಮಗ ಈಗ ಕೇಂದ್ರ ಸರ್ಕಾರಿ ಅಧಿಕಾರಿ : UPSC ಗೆದ್ದ ದೇವ್ ಪ್ರಭಾಕರ್ ಯಶೋಗಾಥೆ!



















