ಬೆಂಗಳೂರು: ನೀವು ಯಾದಗಿರಿ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಕೆಲಸ ಮಾಡಬೇಕು, ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಹೌದು, ಯಾದಗಿರಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ (WCD Yadgir Recruitment 2026) ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಯಾದಗಿರಿ
ಒಟ್ಟು ಹುದ್ದೆಗಳು: 2
ಹುದ್ದೆ ಹೆಸರು: ಜಿಲ್ಲಾ ಸಂಪನ್ಮೂಲ ವ್ಯಕ್ತಿ
ಉದ್ಯೋಗ ಸ್ಥಳ: ಯಾದಗಿರಿ
ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 9
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಎಂಎ, ಎಂಎಸ್ ಡಬ್ಲ್ಯೂ ಕೋರ್ಸ್ ಮುಗಿಸಿರಬೇಕು. ಗರಿಷ್ಠ 50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 35 ಸಾವಿರ ರೂ. ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ yadgir.nic.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಪೋಸ್ಟ್ ಮಾಡಬೇಕು ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
Office of the Deputy Director, Women and Child Development Department, Yadgir Room No.: C-17, First Floor, District Administration Building Complex, Chittapur Yadgiri-585202.
ಇದನ್ನೂ ಓದಿ :ಶುಭ್‌ಮನ್ ಗಿಲ್ ಐತಿಹಾಸಿಕ ದ್ವಿಶತಕ : ವೆಸ್ಟ್ ಇಂಡೀಸ್ ಎದುರು 406 ರನ್ ಗುರಿ ಬೆನ್ನತ್ತಿ ಭಾರತದ ಭರ್ಜರಿ ಜಯ!


















