ಬೆಂಗಳೂರು: ದೇಶದಲ್ಲೇ ಪ್ರಮುಖ ಬಿಸಿನೆಸ್ ಮ್ಯಾನೇಜ್ ಮೆಂಟ್ ಸಂಸ್ಥೆಯಾಗಿರುವ, ಬೆಂಗಳೂರಿನಲ್ಲೇ ಇರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ (IIMB Recruitment 2026) ಸಂಸ್ಥೆಯಲ್ಲಿ ಖಾಲಿ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ವೆಬ್ ಡೆವಲಪರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್, ಬೆಂಗಳೂರು (IIMB)
ಹುದ್ದೆ ಹೆಸರು: ವೆಬ್ ಡೆವಲಪರ್
ಒಟ್ಟು ಹುದ್ದೆ: 1
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 15
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಯಾವುದಾದರೂ ವಿಷಯದಲ್ಲಿ ಪದವಿ ಕೋರ್ಸ್ ಪೂರ್ಣಗೊಳಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕವನ್ನು ನಿಗದಿಪಡಿಸಿಲ್ಲ. ದೇಶದ ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ನೇಮಕಾತಿಗೆ ಸಂಬಂಧಿಸಿದಂತೆ ಶಾರ್ಟ್ ಲಿಸ್ಟ್ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ವರ್ಷಕ್ಕೆ 8.85 ಲಕ್ಷ ರೂ. ಸಂಬಳದ ಪ್ಯಾಕೇಜ್ ಇರಲಿದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ iimb.ac.in ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಬೇಕು
ಇದನ್ನೂ ಓದಿ :ಬೆಂಗಳೂರು ಗ್ರಾಮಾಂತರ ಜಿಲ್ಲಾನ್ಯಾಯಾಲಯದಲ್ಲಿ 86 ಹುದ್ದೆಗಳ ನೇಮಕಾತಿ!


















