ಬೆಂಗಳೂರು : ನೀವೇನಾದರೂ ಎಸ್ಸೆಸ್ಸೆಲ್ಸಿ ಪಾಸಾಗಿ, ರಾಜ್ಯ ಸರ್ಕಾರದ ಉದ್ಯೋಗ ಪಡೆಯಲು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಗದಗದಲ್ಲಿರುವ ಜಿಲ್ಲಾ ಇ-ನ್ಯಾಯಾಲಯದಲ್ಲಿ ಖಾಲಿ ಇರುವ 22 ಹುದ್ದೆಗಳ ನೇಮಕಾತಿ ಗೆ ಅಧಿಸೂಚನೆ ಹೊರಡಿಸಲಾಗಿದೆ. 22 ಪ್ಯೂನ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ನೇಮಕಾತಿಯ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಜಿಲ್ಲಾ ನ್ಯಾಯಾಲಯ, ಗದಗ
ಒಟ್ಟು ಹುದ್ದೆಗಳು: 22
ಹುದ್ದೆಗಳ ಹೆಸರು: ಪ್ಯೂನ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 31
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಜನರಲ್, ಒಬಿಸಿ ಕೆಟಗರಿಯವರಿಗೆ 100 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ gadag.dcourts.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು
- ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
- ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
- ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ, ಅರ್ಜಿ ಸಲ್ಲಿಸಬೇಕು
- ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ :MDR ಉಳಿಸಲು 6 ಸಾವಿರ ರೂ. ಬದಲು 3 ಬಾರಿ 2 ಸಾವಿರ ರೂ. UPI ಮಾಡಿದರೆ ಏನಾಗುತ್ತದೆ?



















