ಬೆಂಗಳೂರು: ದೇಶದ ಸೇನೆ ಸೇರಬೇಕು, ದೇಶದ ಸೇವೆ ಮಾಡಬೇಕು ಎಂದು ಬಯಸುತ್ತಿರುವವರಿಗೆ ಶುಭ ಸಮಾಚಾರ ದೊರಕಿದೆ. ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆಯಲ್ಲಿ (ITBP Recruitment 2026) ಖಾಲಿ ಇರುವ 126 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 126 ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆ (ITBP)
ಒಟ್ಟು ಹುದ್ದೆಗಳು: 126
ಹುದ್ದೆಗಳ ಹೆಸರು: ಕಾನ್ ಸ್ಟೆಬಲ್
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 1
ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಎಸ್ಸೆಸ್ಸೆಲ್ಸಿ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 23 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಜನರಲ್, ಒಬಿಸಿ ಸಮುದಾಯದವರಿಗೆ 100 ರೂಪಾಯಿ ಅರ್ಜಿ ಶುಲ್ಕವಿದೆ. ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 69 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ itbpolice.nic.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು.
ಇದನ್ನೂ ಓದಿ : ಹಬ್ಬದ ಹಿನ್ನೆಲೆಯಲ್ಲಿ ಮೊಬೈಲ್ ಗಳಿಗೆ ಫ್ಲಿಪ್ ಕಾರ್ಟ್ ಭರ್ಜರಿ ಆಫರ್ ಘೋಷಣೆ!



















