ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸೆಂಟರ್ ಫಾರ್ ಡೆವಲಪ್ ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (CDAC Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 951 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಾಜೆಕ್ಟ್ ಅಸೋಸಿಯೇಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಸೆಂಟರ್ ಫಾರ್ ಡೆವಲಪ್ ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (CDAC)
ಒಟ್ಟು ಹುದ್ದೆ: 951
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಉದ್ಯೋಗ ಸ್ಥಳ: ಬೆಂಗಳೂರು ಸೇರಿ ದೇಶಾದ್ಯಂತ
ಹುದ್ದೆಗಳ ಹೆಸರು: ಪ್ರಾಜೆಕ್ಟ್ ಅಸೋಸಿಯೇಟ್ ಇತ್ಯಾದಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 26
ಪ್ರಾಜೆಕ್ಟ್ ಅಸೋಸಿಯೇಟ್ ಹಾಗೂ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿಯೇ 272 ಹುದ್ದೆಗಳು ಖಾಲಿ ಇವೆ. ಕನ್ಸಲ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್, ಎಂಸಿಎ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ 1.75 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ cdac.in ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಬೇಕು.
ಇದನ್ನೂ ಓದಿ :ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ 21 ಹುದ್ದೆಗಳ ನೇಮಕಾತಿ : ರಾಜ್ಯದ 4 ಜಿಲ್ಲೆಗಳಲ್ಲಿ ಕೆಲಸ!



















