ಬೆಂಗಳೂರು: ನೀವು ಯಾವುದಾದರೂ ಪದವಿ ಮುಗಿಸಿದ್ದೀರಾ? ಕೇಂದ್ರ ಸರ್ಕಾರದ ಉದ್ಯೋಗ ಪಡೆಯಲು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಪರಮಾಣು ವಿದ್ಯುತ್ ನಿಗಮದಲ್ಲಿ (NPCIL Recruitment 2026) ಖಾಲಿ ಇರುವ 51 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಪರಮಾಣು ವಿದ್ಯುತ್ ನಿಗಮ
ಒಟ್ಟು ಹುದ್ದೆಗಳು: 51
ಹುದ್ದೆಗಳ ಹೆಸರು: ಸಿಎ, ಸಿಎಂಎ ಇಂಟರ್ನ್
ಉದ್ಯೋಗ ಸ್ಥಳ: ಕರ್ನಾಟಕ ಸೇರಿ ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 26
ಕರ್ನಾಟಕದಲ್ಲಿ 6 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಉಳಿದಂತೆ ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 20 ಸಾವಿರ ರೂ. ಸಂಬಳ ಇದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ npcilcareers.co.inಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು.
ಇದನ್ನೂ ಓದಿ :ಅಕ್ಟೋಬರ್ 15ರಿಂದ ವಿಮೆ, ಒಟಿಟಿ, ಹೂಡಿಕೆಗೂ MDR ಶುಲ್ಕ ಪಾವತಿಸಬೇಕಾ? ಇಲ್ಲಿದೆ ಮಾಹಿತಿ.


















