ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಕೇಂದ್ರ ಸರ್ಕಾರದ ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇಮಕಾತಿ (KV MEG & Centre Bengaluru Recruitment 2026) ಮಾಡಿಕೊಳ್ಳಲಾಗುತ್ತಿದೆ. ಟ್ರೇನ್ಡ್ ಗ್ರ್ಯಾಜುಯೇಟ್ ಟೀಚರ್ (ಟಿಜಿಟಿ) ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇದರೊಂದಿಗೆ ಬೆಂಗಳೂರಿನಲ್ಲೇ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ.
ನೇಮಕಾತಿ ಸಂಸ್ಥೆ: ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯ, ಬೆಂಗಳೂರು
ಹುದ್ದೆ ಹೆಸರು: ಟ್ರೇನ್ಡ್ ಗ್ರ್ಯಾಜುಯೇಟ್ ಟೀಚರ್ (ಟಿಜಿಟಿ) ಇತ್ಯಾದಿ
ಒಟ್ಟು ಹುದ್ದೆ: ವಿವಿಧ
ಉದ್ಯೋಗ ಸ್ಥಳ: ಬೆಂಗಳೂರು
ಸಂದರ್ಶನ ನಡೆಯುವ ದಿನಾಂಕ: ಅಕ್ಟೋಬರ್ 9
ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಟ್ರೇನ್ಡ್ ಗ್ರ್ಯಾಜುಯೇಟ್ ಟೀಚರ್ (ಟಿಜಿಟಿ), ಪೋಸ್ಟ್ ಗ್ರ್ಯಾಜುಯೇಟ್ ಟೀಚರ್ (ಪಿಜಿಟಿ) ಸೇರಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಸಂದರ್ಶನಕ್ಕೆ ಹಾಜರಾಗುವವರಿಗೆ ಕೇಂದ್ರೀಯ ವಿದ್ಯಾಲಯದ ನಿಯಮಗಳ ಅನ್ವಯ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗಲು ಬಯಸುವವರಿಗೆ ಕನಿಷ್ಠ 18ರಿಂದ ಗರಿಷ್ಠ 65 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವ ಮೊದಲು https://samvida-sathi.kvs.in. ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬೇಕು. ನೇರ ಸಂದರ್ಶನಕ್ಕೆ ಹಾಜರಾಗುವವರು ಶೈಕ್ಷಣಿಕ ಪ್ರಮಾಣಪತ್ರ, ಇತ್ತೀಚಿನ ಪಾಸ್ ಪೋರ್ಟ್ ಸೈಜಿನ ಫೋಟೋಗಳು ಸೇರಿ ಅಗತ್ಯ ದಾಖಲೆಗಳನ್ನು ತರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ
PM SHRI KV MEG & Center, Bengaluru
ಇದನ್ನೂ ಓದಿ :ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!


















