ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸಂಜೆ ವಾಕಿಂಗ್‌ಗೆ ತೆರಳಿದ್ದ ಪ್ರಾಧ್ಯಾಪಕನ ಅಪಹರಣ; ಮೊಬೈಲ್ ಪಾಸ್‌ವರ್ಡ್ ಪಡೆದು 1 ಲಕ್ಷ ರೂಪಾಯಿ ದೋಚಿದ ದುಷ್ಕರ್ಮಿಗಳು!

October 8, 2026
Share on WhatsappShare on FacebookShare on Twitter

ರಾಂಚಿ: ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯಲ್ಲಿ ಸಂಜೆ ವಾಕಿಂಗ್‌ಗೆ ತೆರಳಿದ್ದ ಪದವಿ ಕಾಲೇಜಿನ ಪ್ರಾಧ್ಯಾಪಕರೊಬ್ಬರನ್ನು ಅಪಹರಿಸಿ, ಚಾಕು ತೋರಿಸಿ ಬೆದರಿಸಿದ ಬಳಿಕ ಅವರ ಮೊಬೈಲ್ ಹಾಗೂ ಯುಪಿಐ ಖಾತೆಗಳನ್ನು ಬಳಸಿಕೊಂಡು ಸುಮಾರು 1 ಲಕ್ಷ ರೂಪಾಯಿ ವರ್ಗಾವಣೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಕುಟುಂಬಸ್ಥರ ಸಮಯೋಚಿತ ಅನುಮಾನದಿಂದ ಪೊಲೀಸರು ಪ್ರಾಧ್ಯಾಪಕರನ್ನು ಸುರಕ್ಷಿತವಾಗಿ ರಕ್ಷಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ಜು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ರಾಯ್‌ಗಢ ಜಿಲ್ಲೆಯ ಪುಸೌರ್ ಪೊಲೀಸ್ ಠಾಣೆ ವ್ಯಾಪ್ತಿಯ ಜಕೆಲಾ ಗ್ರಾಮದಲ್ಲಿ ಅಕ್ಟೋಬರ್ 5ರಂದು ಘಟನೆ ನಡೆದಿದೆ. ಪದವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಕಪೂರ್‌ಚಂದ್ ಗುಪ್ತಾ ಅವರು ಸಂಜೆ 6ರಿಂದ 7 ಗಂಟೆಯ ನಡುವೆ ದೀಪಾಪಾರಾ ಮತ್ತು ಶೋಭಾ ರೈಸ್ ಮಿಲ್ ಸಮೀಪ ವಾಕಿಂಗ್ ಮಾಡುತ್ತಿದ್ದರು. ದಣಿದಿದ್ದ ಅವರು ರಸ್ತೆಯ ಬದಿಯಲ್ಲಿದ್ದ ಕೆರೆಯ ಸಮೀಪದ ಮೈಲಿಗಲ್ಲಿನ ಮೇಲೆ ಕುಳಿತು ವಿಶ್ರಾಂತಿ ಪಡೆಯುತ್ತಿದ್ದರು.
ಈ ವೇಳೆ ಇಬ್ಬರು ವ್ಯಕ್ತಿಗಳು ಅವರ ಬಳಿಗೆ ಬಂದು, ಕೆರೆಯ ಕಡೆಗೆ ಎಳೆದುಕೊಂಡು ಹೋಗಿದ್ದಾರೆ. ಬಳಿಕ ಕಣ್ಣುಗಳಿಗೆ ಬಟ್ಟೆ ಕಟ್ಟಿದ್ದು, ಚಾಕು ತೋರಿಸಿ ಬೆದರಿಸಿದ್ದಾರೆ. ನಂತರ ಬೈಕ್‌ನಲ್ಲಿ ಅವರನ್ನು ಭೂಪದೇವ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪಾಂಡ್ರಿಪಾನಿ ಗ್ರಾಮಕ್ಕೆ ಕರೆದೊಯ್ದು, ಅಲ್ಲಿನ ಕೊಠಡಿಯೊಂದರಲ್ಲಿ ಕೂಡಿ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊಬೈಲ್ ಪಾಸ್‌ವರ್ಡ್ ಪಡೆದು ಯುಪಿಐ ಮೂಲಕ ಹಣ ವರ್ಗಾವಣೆ

ಅಪಹರಣಕಾರರು ಪ್ರಾಧ್ಯಾಪಕರ ಮೇಲೆ ಹಲ್ಲೆ ನಡೆಸಿ ಮೊಬೈಲ್ ಪಾಸ್‌ವರ್ಡ್ ಹೇಳುವಂತೆ ಒತ್ತಾಯಿಸಿದ್ದಾರೆ. ಬಳಿಕ ಅವರ ಗೂಗಲ್ ಪೇ ಮತ್ತು ಭೀಮ್ ಖಾತೆಗಳಿಗೆ ಪ್ರವೇಶ ಪಡೆದಿದ್ದಾರೆ. ಹಣ ವರ್ಗಾವಣೆಗಾಗಿ ಮಹಿಳೆಯೊಬ್ಬರ ಸಂಪರ್ಕ ಪಡೆದು ಆಕೆಯ ಕ್ಯೂಆರ್ ಕೋಡ್‌ನ್ನು ಬಳಸಿಕೊಂಡು ಪ್ರಾಧ್ಯಾಪಕರ ಬ್ಯಾಂಕ್ ಖಾತೆಯಿಂದ ಹಣ ವರ್ಗಾಯಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಖಾತೆಯಲ್ಲಿನ ಹಣ ವರ್ಗಾವಣೆಯ ಮಿತಿ ಸುಮಾರು 1 ಲಕ್ಷ ರೂಪಾಯಿ ತಲುಪುವವರೆಗೆ ವಹಿವಾಟು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಅಪಹರಣದ ಜತೆಗೆ ಡಿಜಿಟಲ್ ಪಾವತಿ ವ್ಯವಸ್ಥೆಯನ್ನೂ ಬಳಸಿಕೊಂಡು ಹಣ ದೋಚುವ ಸಂಚು ರೂಪಿಸಲಾಗಿತ್ತು ಎನ್ನಲಾಗಿದೆ.

ಕುಟುಂಬಸ್ಥರ ಅನುಮಾನದಿಂದ ಆರೋಪಿಗಳ ಸಂಚು ಬಯಲು

ಪ್ರಾಧ್ಯಾಪಕರನ್ನು ಅಪಹರಿಸಿದವರು ಅನುಮಾನ ಬಾರದಂತೆ ಕುಟುಂಬಸ್ಥರಿಗೆ ಕರೆ ಮಾಡಿಸಿ ತಾವು ಸುರಕ್ಷಿತವಾಗಿರುವುದಾಗಿ ಹೇಳಿಸಿದ್ದಾರೆ. ಆದರೆ ಅವರ ಮಾತಿನ ಮೇಲೆ ಅನುಮಾನಗೊಂಡ ಕುಟುಂಬಸ್ಥರು ಸ್ವತಃ ಅವರ ಸ್ಥಳವನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ. ಈ ಹುಡುಕಾಟ ಪಾಂಡ್ರಿಪಾನಿ ಗ್ರಾಮದವರೆಗೆ ತಲುಪಿದೆ.ಕುಟುಂಬಸ್ಥರು ತಮ್ಮತ್ತ ಬರುತ್ತಿರುವುದನ್ನು ಅರಿತ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಕೊಠಡಿಯಲ್ಲಿ ಬಂಧಿಯಾಗಿದ್ದ ಪ್ರಾಧ್ಯಾಪಕರನ್ನು ಅಲ್ಲಿಯೇ ಬಿಟ್ಟು ಹೋಗಿದ್ದಾರೆ. ಬಳಿಕ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

24 ಗಂಟೆಯೊಳಗೆ ಓರ್ವ ಆರೋಪಿ ಬಂಧನ

ಮಾಹಿತಿ ಪಡೆದ ಪುಸೌರ್ ಠಾಣಾಧಿಕಾರಿ ಹರ್ಷವರ್ಧನ್ ಸಿಂಗ್ ನೇತೃತ್ವದ ತಂಡ ಸ್ಥಳಕ್ಕೆ ತೆರಳಿ ಪ್ರಾಧ್ಯಾಪಕರನ್ನು ಸುರಕ್ಷಿತವಾಗಿ ರಕ್ಷಿಸಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ರಾಯ್‌ಗಢದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶಶಿ ಮೋಹನ್ ಸಿಂಗ್ ಆರೋಪಿಗಳ ಬಂಧನಕ್ಕೆ ತಕ್ಷಣ ಕಾರ್ಯಾಚರಣೆಗೆ ಸೂಚಿಸಿದ್ದಾರೆ.ತನಿಖೆ ನಡೆಸಿದ ಪೊಲೀಸರು ಜಕೆಲಾ ಗ್ರಾಮದ ನಿವಾಸಿ ಸುನಿಲ್ ಸಾರಥಿಯನ್ನು ಘಟನೆ ನಡೆದ 24 ಗಂಟೆಯೊಳಗೆ ಬಂಧಿಸಿದ್ದಾರೆ. ವಿಚಾರಣೆ ವೇಳೆ ಅಪಹರಣ ಹಾಗೂ ಸಹಚರರೊಂದಿಗೆ ಸೇರಿ ಯುಪಿಐ ಮೂಲಕ ಹಣ ವರ್ಗಾವಣೆ ಮಾಡುವ ಸಂಚಿನಲ್ಲಿ ಭಾಗಿಯಾಗಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಉಳಿದ ಆರೋಪಿಗಳ ಗುರುತು ಪತ್ತೆಯಾಗಿದ್ದು, ಅವರ ಬಂಧನಕ್ಕಾಗಿ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಲಾಗುತ್ತಿದೆ.

ಡಿಜಿಟಲ್ ಹಣದ ಜಾಡು ಪತ್ತೆಗೆ ತನಿಖೆ

ಪ್ರಾಧ್ಯಾಪಕರ ಖಾತೆಯಿಂದ ಹಣ ವರ್ಗಾವಣೆಗೆ ಬಳಸಲಾಗಿದೆ ಎನ್ನಲಾದ ಮಹಿಳೆಯ ಕ್ಯೂಆರ್ ಕೋಡ್ ಕುರಿತು ಕೂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆಕೆಯನ್ನು ಸಂಪರ್ಕಿಸಲಾಗಿದ್ದು, ವರ್ಗಾವಣೆಯಾದ ಹಣವನ್ನು ಸುರಕ್ಷಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಿಳೆಗೆ ಆರೋಪಿಗಳೊಂದಿಗೆ ಇರುವ ಸಂಬಂಧವೇನು, ಆಕೆಯ ಬ್ಯಾಂಕ್ ಖಾತೆ ಅಥವಾ ಯುಪಿಐ ಗುರುತನ್ನು ಈ ಹಿಂದೆ ಯಾವುದೇ ಅಪರಾಧ ಚಟುವಟಿಕೆಯಲ್ಲಿ ಬಳಸಲಾಗಿದೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ. ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ವಿಧಿಗಳಡಿ ಪ್ರಕರಣ ದಾಖಲಾಗಿದ್ದು, ಅಪಹರಣದಂತಹ ಸಾಂಪ್ರದಾಯಿಕ ಅಪರಾಧಗಳಿಗೆ ಈಗ ಡಿಜಿಟಲ್ ಪಾವತಿ ವ್ಯವಸ್ಥೆಯನ್ನೂ ಬಳಸಿಕೊಳ್ಳುತ್ತಿರುವ ಆತಂಕಕಾರಿ ಬೆಳವಣಿಗೆ ಈ ಪ್ರಕರಣದಿಂದ ಮತ್ತೊಮ್ಮೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ :ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!

Tags: Breaking NewsCrime NewsCrime UpdateCriminal IncidentExtortion CaseIndia Crime NewsKidnapping NewsLaw and orderMobile Password TheftNews beatPolice InvestigationProfessor AbductionProfessor Kidnappingrobbery caseShocking Crime
SendShareTweet
Previous Post

ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!

Next Post

ಹಾಲಿಗೆ ಡಿಟರ್ಜೆಂಟ್, ಎಮಲ್ಸಿಫೈಯರ್ ಬೆರೆಸಿ ಮಾರಾಟ? ಭಾರೀ ಕಲಬೆರಕೆ ಜಾಲ ಬಯಲು!

Related Posts

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?
ದೇಶ

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ರೆಪೊ ದರ 25 ಬೇಸಿಸ್ ಪಾಯಿಂಟ್ಸ್ ಹೆಚ್ಚಳ : ನಿಮ್ಮ EMI ಎಷ್ಟು ಹೆಚ್ಚಾಗುತ್ತದೆ? ಇಲ್ಲಿದೆ ಲೆಕ್ಕಾಚಾರ!
ದೇಶ

ರೆಪೊ ದರ 25 ಬೇಸಿಸ್ ಪಾಯಿಂಟ್ಸ್ ಹೆಚ್ಚಳ : ನಿಮ್ಮ EMI ಎಷ್ಟು ಹೆಚ್ಚಾಗುತ್ತದೆ? ಇಲ್ಲಿದೆ ಲೆಕ್ಕಾಚಾರ!

ರಾಹುಲ್ ಗಾಂಧಿ ಬಂಧನ ವೇಳೆ ಕಚ್ಚಿ, ಪರಚಿ ಪೊಲೀಸ್ ಪೇದೆ ಮೇಲೆ ಬರ್ಬರ ಹಲ್ಲೆ!
ದೇಶ

ರಾಹುಲ್ ಗಾಂಧಿ ಬಂಧನ ವೇಳೆ ಕಚ್ಚಿ, ಪರಚಿ ಪೊಲೀಸ್ ಪೇದೆ ಮೇಲೆ ಬರ್ಬರ ಹಲ್ಲೆ!

ಅಕ್ಟೋಬರ್ 15ರಿಂದ ವಿಮೆ, ಒಟಿಟಿ, ಹೂಡಿಕೆಗೂ MDR ಶುಲ್ಕ ಪಾವತಿಸಬೇಕಾ? ಇಲ್ಲಿದೆ ಮಾಹಿತಿ.
ದೇಶ

ಅಕ್ಟೋಬರ್ 15ರಿಂದ ವಿಮೆ, ಒಟಿಟಿ, ಹೂಡಿಕೆಗೂ MDR ಶುಲ್ಕ ಪಾವತಿಸಬೇಕಾ? ಇಲ್ಲಿದೆ ಮಾಹಿತಿ.

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!
ದೇಶ

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!
ದೇಶ

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

Next Post
ಹಾಲಿಗೆ ಡಿಟರ್ಜೆಂಟ್, ಎಮಲ್ಸಿಫೈಯರ್ ಬೆರೆಸಿ ಮಾರಾಟ? ಭಾರೀ ಕಲಬೆರಕೆ ಜಾಲ ಬಯಲು!

ಹಾಲಿಗೆ ಡಿಟರ್ಜೆಂಟ್, ಎಮಲ್ಸಿಫೈಯರ್ ಬೆರೆಸಿ ಮಾರಾಟ? ಭಾರೀ ಕಲಬೆರಕೆ ಜಾಲ ಬಯಲು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ಕಾಮರ್ಸ್ ಪದವಿ ಓದುತ್ತಿರುವವರಿಗೆ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : 5.5 ಲಕ್ಷ ರೂ.ವರೆಗೆ ಸ್ಕಾಲರ್ ಶಿಪ್!

ಕಾಮರ್ಸ್ ಪದವಿ ಓದುತ್ತಿರುವವರಿಗೆ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : 5.5 ಲಕ್ಷ ರೂ.ವರೆಗೆ ಸ್ಕಾಲರ್ ಶಿಪ್!

ರೆಪೊ ದರ 25 ಬೇಸಿಸ್ ಪಾಯಿಂಟ್ಸ್ ಹೆಚ್ಚಳ : ನಿಮ್ಮ EMI ಎಷ್ಟು ಹೆಚ್ಚಾಗುತ್ತದೆ? ಇಲ್ಲಿದೆ ಲೆಕ್ಕಾಚಾರ!

ರೆಪೊ ದರ 25 ಬೇಸಿಸ್ ಪಾಯಿಂಟ್ಸ್ ಹೆಚ್ಚಳ : ನಿಮ್ಮ EMI ಎಷ್ಟು ಹೆಚ್ಚಾಗುತ್ತದೆ? ಇಲ್ಲಿದೆ ಲೆಕ್ಕಾಚಾರ!

ಹಾಲಿಗೆ ಡಿಟರ್ಜೆಂಟ್, ಎಮಲ್ಸಿಫೈಯರ್ ಬೆರೆಸಿ ಮಾರಾಟ? ಭಾರೀ ಕಲಬೆರಕೆ ಜಾಲ ಬಯಲು!

ಹಾಲಿಗೆ ಡಿಟರ್ಜೆಂಟ್, ಎಮಲ್ಸಿಫೈಯರ್ ಬೆರೆಸಿ ಮಾರಾಟ? ಭಾರೀ ಕಲಬೆರಕೆ ಜಾಲ ಬಯಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ಕಾಮರ್ಸ್ ಪದವಿ ಓದುತ್ತಿರುವವರಿಗೆ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : 5.5 ಲಕ್ಷ ರೂ.ವರೆಗೆ ಸ್ಕಾಲರ್ ಶಿಪ್!

ಕಾಮರ್ಸ್ ಪದವಿ ಓದುತ್ತಿರುವವರಿಗೆ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : 5.5 ಲಕ್ಷ ರೂ.ವರೆಗೆ ಸ್ಕಾಲರ್ ಶಿಪ್!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat