ಬೆಂಗಳೂರು: ಫೈನಾನ್ಸ್ ಹಾಗೂ ಕಾಮರ್ಸ್ ವಿಭಾಗದಲ್ಲಿ ಡಿಗ್ರಿ ಕೋರ್ಸಿಗೆ ಪ್ರವೇಶ ಪಡೆದಿರುವವರಿಗೆ ಶುಭ ಸಮಾಚಾರ ದೊರೆತಿದೆ. ರಾಮನ್ ಕಾಂತ್ ಮುಂಜಾಲ್ ಫೌಂಡೇಷನ್ ಹಾಗೂ ಹೀರೋ ಫಿನ್ ಕಾರ್ಪ್ ಸಹಯೋಗದಲ್ಲಿ ಪದವಿ ಮೊದಲ ವರ್ಷದ ವಿದ್ಯಾರ್ಥಿಗಳಿಗೆ 5.5 ಲಕ್ಷ ರೂ. ಸ್ಕಾಲರ್ ಶಿಪ್ (Raman Kant Munjal Scholarship 2026–27) ಘೋಷಣೆ ಮಾಡಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಬಿಬಿಎ, ಬಿಎಫ್ ಐಎ, ಬಿ.ಕಾಂ, ಬ್ಯಾಚುಲರ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ (ಬಿಎಂಎಸ್), ಇಂಟಿಗ್ರೇಟೆಡ್ ಪ್ರೋಗ್ರಾಂ ಇನ್ ಮ್ಯಾನೇಜ್ ಮೆಂಟ್ (ಐಪಿಎಂ), ಬಿಎ (ಅರ್ಥಶಾಸ್ತ್ರ) ಮತ್ತು ಬ್ಯಾಚುಲರ್ ಇನ್ ಬಿಸಿನೆಸ್ ಸ್ಟಡೀಸ್ (ಬಿಬಿಎಸ್) ಸೇರಿ ವಿವಿಧ ಕೋರ್ಸ್ ಗಳ ಮೊದಲ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳಿಗೆ ಮೂರು ವರ್ಷಗಳವರೆಗೆ ವರ್ಷಕ್ಕೆ 5.5 ಲಕ್ಷ ರೂಪಾಯಿ ಸ್ಕಾಲರ್ ಶಿಪ್ ನೀಡಲಾಗುತ್ತದೆ.
ಅರ್ಹತೆಗಳು ಏನೇನು?
ಅರ್ಜಿದಾರರು 10 ಮತ್ತು 12 ನೇ ತರಗತಿಗಳಲ್ಲಿ ಕನಿಷ್ಠ 80% ಅಂಕಗಳನ್ನು ಪಡೆದಿರಬೇಕು. ಅರ್ಜಿದಾರರ ಪೋಷಕರ ವಾರ್ಷಿಕ ಆದಾಯವು ಎಲ್ಲ ಮೂಲಗಳಿಂದ 6 ಲಕ್ಷ ರೂಪಾಯಿ ಮೀರಬಾರದು. ಭಾರತೀಯ ಪ್ರಜೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಹೀರೋ ಫಿನ್ ಕಾರ್ಪ್, ರಾಮನ್ ಕಾಂತ್ ಮುಂಜಾಲ್ ಫೌಂಡೇಷನ್ ಮತ್ತು ಬಡಿ4ಸ್ಟಡಿಯ ಉದ್ಯೋಗಿಗಳು/ಗುತ್ತಿಗೆ ನೌಕರರ ಮಕ್ಕಳು ಅರ್ಜಿ ಸಲ್ಲಿಸಲು ಅನರ್ಹರು ಎಂದು ತಿಳಿಸಲಾಗಿದೆ.
ರೈತರು, ಮನೆಕೆಲಸಗಾರರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇತ್ತೀಚಿನ ಪಾಸ್ಟ್ ಪೋರ್ಟ್ ಸೈಜಿನ ಫೋಟೋ, ಕಾಲೇಜು ಪ್ರವೇಶಾತಿ ದಾಖಲೆ, ಪೋಷಕರ ಆದಾಯ ಪ್ರಮಾಣಪತ್ರ, ಎಸ್ಸೆಸ್ಸೆಲ್ಸಿ, ಪಿಯುಸಿ ಅಂಕಪಟ್ಟಿ, ಕಾಲೇಜು ಐ.ಡಿ ಕಾರ್ಡ್, ಪಾಸ್ ಬುಕ್ ಸೇರಿ ಹಲವು ದಾಖಲೆಗಳನ್ನು ಸಲ್ಲಿಸಬೇಕು. ಅಭ್ಯರ್ಥಿಗಳು https://www.buddy4study.com/page/raman-kant-munjal-scholarships# ಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನ.
ಇದನ್ನೂ ಓದಿ :ರೆಪೊ ದರ 25 ಬೇಸಿಸ್ ಪಾಯಿಂಟ್ಸ್ ಹೆಚ್ಚಳ : ನಿಮ್ಮ EMI ಎಷ್ಟು ಹೆಚ್ಚಾಗುತ್ತದೆ? ಇಲ್ಲಿದೆ ಲೆಕ್ಕಾಚಾರ!


















