ಬೆಂಗಳೂರು: ಕೇಂದ್ರ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ದೇಶದ ನವರತ್ನ ಕಂಪನಿಗಳಲ್ಲಿ ಒಂದಾಗಿರುವ ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆಯಲ್ಲಿ (RITES Recruitment 2026) ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2 ಎಂಜಿನಿಯರ್- ಯುಟಿ ಟೆಸ್ಟಿಂಗ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆ (RITES)
ಒಟ್ಟು ಹುದ್ದೆಗಳು: 2
ಹುದ್ದೆಗಳ ಹೆಸರು: ಎಂಜಿನಿಯರ್
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 1
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ ಹಾಗೂ ಡಿಪ್ಲೋಮಾ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 40 ವರ್ಷ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 28,444 ರೂ. ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ rites.com ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು.
ಇದನ್ನೂ ಓದಿ :ಈ ಸರ್ಕಾರಿ ಬ್ಯಾಂಕಿನಲ್ಲಿ ಸಾಲ ಪಡೆಯುವವರಿಗೆ ಗುಡ್ ನ್ಯೂಸ್: ಪ್ರೊಸೆಸಿಂಗ್ ಫೀ ಇಲ್ಲ, ಬಡ್ಡಿ ಕಡಿಮೆ!



















