ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಬೆಂಗಳೂರಿನಲ್ಲೇ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಲಭಿಸಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ (BEML Recruitment 2026) ಖಾಲಿ ಇರುವ 20 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ (BEML)
ಹುದ್ದೆ ಹೆಸರು: ಮ್ಯಾನೇಜರ್ ಇತ್ಯಾದಿ
ಒಟ್ಟು ಹುದ್ದೆಗಳು: 20
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 22
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಜಿನಿಯರಿಂಗ್ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. 2ರಿಂದ 4 ವರ್ಷಗಳ ಕಾರ್ಯಾನುಭವ ಇರುವವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.6 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ www.bemlindia.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು.
ಇದನ್ನೂ ಓದಿ :ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ 150 ಹುದ್ದೆಗಳ ನೇಮಕಾತಿ: ಕರ್ನಾಟಕದ 2 ಜಿಲ್ಲೆಗಳಲ್ಲಿ ಉದ್ಯೋಗ



















