ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದರೆ, ನಿಮಗೊಂದು ಗುಡ್ ನ್ಯೂಸ್ ಇದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ (BEL Recruitment 2026) ಖಾಲಿ ಇರುವ 14 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆಗಳು: 14
ಹುದ್ದೆ ಹೆಸರು: ಪ್ರಾಜೆಕ್ಟ್ ಮ್ಯಾನೇಜರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 23
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಎಸ್ಸಿ, ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 55 ಸಾವಿರ ರೂ. ಸಂಬಳ ನೀಡಲಾಗುತ್ತದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ bel-india.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು.
ಇದನ್ನೂ ಓದಿ :ಕೇಂದ್ರದ BEML ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : ತಿಂಗಳಿಗೆ 1.6 ಲಕ್ಷ ರೂ. ಸ್ಯಾಲರಿ



















