ಬೆಂಗಳೂರು: ಕೇಂದ್ರ ಸರ್ಕಾರದ ಉದ್ಯೋಗಕ್ಕಾಗಿ ಪ್ರಯತ್ನ ನಡೆಸುತ್ತಿರುವ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಶುಭ ಸಮಾಚಾರ ದೊರೆತಿದೆ. ಕೇಂದ್ರ ಸರ್ಕಾರದ ರೈಲ್ವೆ ನೇಮಕಾತಿ ಮಂಡಳಿಯು 3,548 ಹುದ್ದೆಗಳ ನೇಮಕಾತಿಗಾಗಿ (RRB Recruitment 2026) ಅಧಿಸೂಚನೆ ಹೊರಡಿಸಿದೆ. ಗೂಡ್ಸ್ ಟ್ರೇನ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೂಡಲೇ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ ಹೆಸರು: ರೈಲ್ವೆ ನೇಮಕಾತಿ ಮಂಡಳಿ ( RRB )
ಒಟ್ಟು ಹುದ್ದೆಗಳ ಸಂಖ್ಯೆ: 3,548
ಉದ್ಯೋಗ ಸ್ಥಳ: ದೇಶಾದ್ಯಂತ
ಹುದ್ದೆ ಹೆಸರು: ಗೂಡ್ಸ್ ಟ್ರೇನ್ ಮ್ಯಾನೇಜರ್ ಇತ್ಯಾದಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 6
2,750 ಗೂಡ್ಸ್ ಟ್ರೇನ್ ಮ್ಯಾನೇಜರ್, 371 ಸೀನಿಯರ್ ಕ್ಲರ್ಕ್, 127 ಟಿಕೆಟ್ ಸೂಪರ್ ವೈಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ ಪಡೆದಿರಬೇಕು. ಅಭ್ಯರ್ಥಿಗಳಿಗೆ ಗರಿಷ್ಠ 33 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಉಳಿದವರಿಗೆ 500 ರೂ. ಶುಲ್ಕ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ rrbapply.gov.inವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು.



















