ಬೆಂಗಳೂರು: ನೀವೇನಾದರೂ ಬೆಳಗಾವಿ ಜಿಲ್ಲೆಯವರಾಗಿದ್ದು, ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದರೆ ಒಳ್ಳೆಯ ಅವಕಾಶ ದೊರೆತಿದೆ. ಬೆಳಗಾವಿಯಲ್ಲಿರುವ ಜಿಲ್ಲಾ ಕ್ಷಯರೋಗ ನಿಯಂತ್ರಣ ಕಚೇರಿಯಲ್ಲಿ ಖಾಲಿ ಇರುವ 6 ಹುದ್ದೆಗಳ ನೇಮಕಾತಿಗೆ (District Tuberculosis Control Office Belagavi Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 6 ಲ್ಯಾಬ್ ಟೆಕ್ನಿಶಿಯನ್ ಹಾಗೂ ಸ್ಟಾಫ್ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಕ್ಷಯರೋಗ ನಿಯಂತ್ರಣ ಕಚೇರಿ, ಬೆಳಗಾವಿ
ಹುದ್ದೆಗಳ ಹೆಸರು: ಲ್ಯಾಬ್ ಟೆಕ್ನಿಶಿಯನ್ ಹಾಗೂ ಸ್ಟಾಫ್ ನರ್ಸ್
ಒಟ್ಟು ಹುದ್ದೆಗಳು: 6
ಉದ್ಯೋಗ ಸ್ಥಳ: ಬೆಳಗಾವಿ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 17
ಅರ್ಜಿ ಸಲ್ಲಿಸಲು ಬಯಸುವವರು ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮಾ ಹಾಗೂ ಬಿಎಸ್ಸಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಇದಾದ ಬಳಿಕ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 22 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ zpbelagavi.karnataka.gov.inಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿ ಹಾಗೂ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
District Tuberculosis Control Officer, District Tuberculosis Control Centre, M. Vadagaon, Belagavi – 590005, Karnataka.
ಇದನ್ನೂ ಓದಿ:ಕೇಂದ್ರದ MRPL ಸಂಸ್ಥೆಯಲ್ಲಿ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ!



















