ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (CSB Junior Research Fellow Recruitment 2026) ಹೊರಡಿಸಲಾಗಿದೆ. 3 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವ ಮೂಲಕ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬಹುದು.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕೇಂದ್ರೀಯ ರೇಷ್ಮೆ ಮಂಡಳಿ
ಒಟ್ಟು ಹುದ್ದೆಗಳು: 3
ಹುದ್ದೆಗಳ ಹೆಸರು: ಜೂನಿಯರ್ ರಿಸರ್ಚ್ ಫೆಲೋ
ಉದ್ಯೋಗ ಸ್ಥಳ: ಬೆಂಗಳೂರು
ನೇಮಕಾತಿ ವಿಧಾನ: ನೇರ ಸಂದರ್ಶನ
ಸಂದರ್ಶನದ ದಿನಾಂಕ: ಅಕ್ಟೋಬರ್ 27
ಬೆಂಗಳೂರಿನ ಕೊಡತಿಯಲ್ಲಿರುವ ರೇಷ್ಮೆ ಹುಳು ಬೀಜ ತಂತ್ರಜ್ಞಾನ ಸಂಶೋಧನಾ ಸಂಸ್ಥೆ (Institute for Silkworm Seed Technology Research – ISTR)ಯಲ್ಲಿ ನೇಮಕಾತಿ ನಡೆಯುತ್ತಿದೆ. ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಎಸ್ಸಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮೊದಲು https://istr.res.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡ ಬಳಿಕ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 35 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಸಂದರ್ಶನ ನಡೆಯುವ ಸ್ಥಳ: ISTR, ಕೊಡತಿ, ಕಾರ್ಮೆಲಾರಂ ಪೋಸ್ಟ್, ಬೆಂಗಳೂರು – 560035. ಸಮಯ: ಬೆಳಗ್ಗೆ 9.30.
ಇದನ್ನೂ ಓದಿ:ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ



















