ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PM-JAY) ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ವಾರ್ಷಿಕವಾಗಿ 5 ಲಕ್ಷ ರೂಪಾಯಿವರೆಗೆ ಉಚಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ದೊರೆಯುತ್ತದೆ. ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಯ ದೊಡ್ಡ ಮೊತ್ತದ ಬಿಲ್ ನಿಂದ ಬಡ ಹಾಗೂ ಮಧ್ಯಮ ವರ್ಗದ ಜನರನ್ನು ಪಾರು ಮಾಡಲು ಈ ಕಾರ್ಡ್ ಅತ್ಯಂತ ಉಪಯುಕ್ತವಾಗಿದೆ.
ಈ ಕಾರ್ಡ್ ಇದ್ದರೆ ದೇಶಾದ್ಯಂತ ಪಟ್ಟಿ ಮಾಡಲಾದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಗುಣಮಟ್ಟದ ಚಿಕಿತ್ಸೆ ಪಡೆಯಬಹುದು. ನೀವು ಕೂಡ ಮನೆಯಲ್ಲೇ ಕುಳಿತು ಆನ್ಲೈನ್ ಮೂಲಕ ಆಯುಷ್ಮಾನ್ ಭಾರತ್ ಕಾರ್ಡ್ (Ayushman Card) ಪಡೆಯಲು ಬಯಸಿದರೆ, ಈ ಕೆಳಗಿನ ಸರಳ ಹಂತಗಳನ್ನು ಅನುಸರಿಸಿ.
ಅರ್ಜಿ ಸಲ್ಲಿಸುವ ವಿಧಾನ
- ಮೊದಲು ಸರ್ಕಾರದ ಅಧಿಕೃತ ವೆಬ್ಸೈಟ್ beneficiary.nha.gov.in ಅಥವಾ PMJAY ಆ್ಯಪ್ ಗೆ ಭೇಟಿ ನೀಡಿ.
- ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಒಟಿಪಿ ಬಳಸಿ ಲಾಗಿನ್ ಮಾಡಿ.
- ನಂತರ ನಿಮ್ಮ ರಾಜ್ಯ, ಜಿಲ್ಲೆ ಹಾಗೂ ನಿಮ್ಮ ಹೆಸರು ಅಥವಾ ರೇಷನ್ ಕಾರ್ಡ್ ವಿವರಗಳನ್ನು ನಮೂದಿಸಿ ಅರ್ಹತೆಯನ್ನು ಪರಿಶೀಲಿಸಿ.
- ನಿಮ್ಮ ಹೆಸರು ಪಟ್ಟಿಯಲ್ಲಿದ್ದರೆ, ಇ-ಕೆವೈಸಿ ಪ್ರಕ್ರಿಯೆಗಾಗಿ ಆಧಾರ್ ಕಾರ್ಡ್ ವಿವರಗಳನ್ನು ನೀಡಿ ಮತ್ತು ಫೋಟೋ ಅಪ್ ಲೋಡ್ ಮಾಡಿ.
- ಇ-ಕೆವೈಸಿ ಪೂರ್ಣಗೊಂಡ ಬಳಿಕ ನಿಮ್ಮ ಅರ್ಜಿ ಸಲ್ಲಿಕೆಯಾಗುತ್ತದೆ. ಪರಿಶೀಲನೆಯ ನಂತರ ಡಿಜಿಟಲ್ ಆಯುಷ್ಮಾನ್ ಕಾರ್ಡ್ ಅನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.
ಇದನ್ನೂ ಓದಿ:3 ಹೊಸ ಯೋಜನೆ ಘೋಷಿಸಿದ LIC: ಗ್ರಾಹಕರಿಗೆ ಏನೆಲ್ಲ ಲಾಭಗಳು?


















