ಬೆಂಗಳೂರು:ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ವಿವಾದ ತೀವ್ರಗೊಂಡಿದ್ದು, ಪೊಲೀಸರು ಇಬ್ಬರು ಜೆಡಿಎಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಜೆಡಿಎಸ್ ಸೋಷಿಯಲ್ ಮೀಡಿಯಾ ವಿಭಾಗದ ಅಧ್ಯಕ್ಷರನ್ನು ವಶಕ್ಕೆ ಪಡೆದಿರುವ ಖಾಕಿ ಕ್ರಮಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸರ್ಕಾರaದ ವಿರುದ್ಧ ಗರಂ ಆಗಿದ್ದಾರೆ.
ಸ್ಟಿಂಗ್ ಆಪರೇಷನ್ ಮಾಡಿದವರನ್ನು ಅರೆಸ್ಟ್ ಮಾಡಬೇಕು ಎಂದಿರುವ ಕುಮಾರಸ್ವಾಮಿ, ಇದರ ಅಸಲಿ ಸೂತ್ರದಾರರು ಯಾರು ಅನ್ನೋದು ಸ್ವತಃ ಸಿಎಂ ಫೈಲಿನಲ್ಲಿದೆ ಎಂದು ಕಿಡಿಕಾರಿದ್ದಾರೆ. ಸ್ಟಿಂಗ್ ಆಪರೇಷನ್ ವಿಚಾರವನ್ನು ಮೊದಲು ಸಾರ್ವಜನಿಕವಾಗಿ ಮುನ್ನೆಲೆಗೆ ತಂದಿದ್ದು ರಾಜ್ಯದ ಸಿಎಂ ತಾನೇ? ಇದರ ಮೂಲ ಅವರ ಹತ್ತಿರದಲ್ಲೇ ಇದೆ ಅಲ್ಲವಾ? ಎಂದು ಸರ್ಕಾರದ ನಡೆಗೆ ಕೇಂದ್ರ ಸಚಿವರು ತೀವ್ರ ಪ್ರಶ್ನೆಗಳನ್ನು ಎಸೆದಿದ್ದಾರೆ.

















