ಶಿವಮೊಗ್ಗ:ಜಿಲ್ಲೆಯ ಶಿಕಾರಿಪುರದಲ್ಲಿ ನಡೆದ ಬಗರ್ಹುಕುಂ ಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿಗೆ ಶಾಸಕ ಬಿ.ವೈ. ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ. ಬರಗಾಲದಿಂದ ಸಂಕಷ್ಟದಲ್ಲಿರುವ ಸಾಗುವಳಿದಾರರಿಗೆ ತೊಂದರೆ ನೀಡದಂತೆ ಎಚ್ಚರಿಕೆ ನೀಡಿದ್ದಾರೆ.
ಅರ್ಹ ರೈತರಿಗೆ ಭೂಮಿ ನೀಡಲು ಸಕಾರಣ ಹುಡುಕಿ, ಅನಗತ್ಯ ಕಿರುಕುಳ ನೀಡಬೇಡಿ ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಗೊಂದಲಗಳಿದ್ದರೆ ಅಧಿಕಾರಿಗಳ ಹಂತದಲ್ಲೇ ಬಗೆಹರಿಸಿಕೊಳ್ಳಲು ಹಾಗೂ ಮುಂದಿನ ಸಭೆಯೊಳಗೆ ಅರ್ಹ ರೈತರ ಕಡತಗಳನ್ನು ಸರಿಪಡಿಸುವಂತೆ ಸೂಚಿಸಿದ್ದಾರೆ. ಅಲ್ಲದೇ, ಜನಪ್ರತಿನಿಧಿಗಳಿಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೆಂದು ಅಸಮಾಧಾನ ಹೊರಹಾಕಿದ್ದಾರೆ.

















