ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಉದ್ಯೋಗ ಹಿಡಿದು, ಒಳ್ಳೆಯ ಜೀವನ ಸಾಗಿಸಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ (BMRCL Recruitment 2025) ಖಾಲಿ ಇರುವ 50 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಸಿಸ್ಟಂಟ್ ಸೆಕ್ಯುರಿಟಿ ಆಫೀಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್
ಒಟ್ಟು ಹುದ್ದೆಗಳು: 50
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್, ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 5
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಗಳ ಹೆಸರು: ಅಸಿಸ್ಟಂಟ್ ಸೆಕ್ಯುರಿಟಿ ಆಫೀಸರ್
ಅರ್ಜಿ ಸಲ್ಲಿಸಲು ಬಯಸುವವರು ಡಿಫೆನ್ಸ್ ನಲ್ಲಿ ಹಾಗೂ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿ ನಿವೃತ್ತರಾಗಿರಬೇಕು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 60 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 32 ಸಾವಿರ ರೂ.ವರೆಗೆ ಸಂಬಳ ನೀಡಲಾಗುತ್ತದೆ. ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು ಕೂಡ bmrc.co.in ಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಬೇಕು. ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಿದ ಅನುಭವವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?
ಮೊದಲಿಗೆ www.bmrc.co.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಆಫ್ ಲೈನ್ ಅರ್ಜಿ ಸಲ್ಲಿಕೆ ವಿಳಾಸ
Dy. General Manager (HR),
Bangalore Metro Rail Corporation Limited,
III Floor, BMTC Complex, K.H. Road, Shanthinagar, Bengaluru 560 027
ಇದನ್ನೂ ಓದಿ:ಇಂಗ್ಲೆಂಡ್ ಅಂಡರ್-19 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದ ಕನ್ನಡಿಗ ಪ್ರತಿಭೆ ಸೃಷ್ಟಿ ಪಾಟೀಲ!


















