ಬೆಂಗಳೂರು : ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (NIMHANS)ಯಲ್ಲಿ ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ (NIMHANS Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಕಮ್ಯುನಿಟಿ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ಇಲ್ಲಿದೆ. ಇದರೊಂದಿಗೆ, ಬೆಂಗಳೂರಿನಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ಲಭಿಸಿದಂತಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ
ಒಟ್ಟು ಹುದ್ದೆಗಳು: 2
ಹುದ್ದೆಗಳ ಹೆಸರು: ಕಮ್ಯುನಿಟಿ ನರ್ಸ್
ಉದ್ಯೋಗ ಸ್ಥಳ: ಬೆಂಗಳೂರು
ನೇಮಕಾತಿ ವಿಧಾನ: ಸಂದರ್ಶನ
ಸಂದರ್ಶನದ ದಿನಾಂಕ: ಅಕ್ಟೋಬರ್ 28
ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಎಸ್ಸಿ ನರ್ಸಿಂಗ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕನ್ನಡ ಮಾತನಾಡಲು ಬರುವುದು ಕಡ್ಡಾಯ ಎಂದು ತಿಳಿಸಲಾಗಿದೆ. ಗರಿಷ್ಠ 40 ವರ್ಷದೊಳಗಿನ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು nimhans.ac.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ನೇಮಕಾತಿ ಹೊಂದಿದವರಿಗೆ 32 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಗುರುತಿನ ಚೀಟಿ, ಶೈಕ್ಷಣಿಕ ದಾಖಲೆಗಳು ಸೇರಿ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ
ಬೋರ್ಡ್ ರೂಮ್ ಮತ್ತು ಪರೀಕ್ಷಾ ಹಾಲ್, 4ನೇ ಮಹಡಿ, ಎನ್ ಬಿಆರ್ ಸಿ ಕಟ್ಟಡ, ನಿಮ್ಹಾನ್ಸ್, ಬೆಂಗಳೂರು – 560029.
ಇದನ್ನೂ ಓದಿ:ಮುಂಬೈ ಇಂಡಿಯನ್ಸ್ ನಾಯಕನಾಗಿ ರೋಹಿತ್ ಶರ್ಮಾ ಮರಳಲಿ: IPL 2027ರ ಮುನ್ನ ಅಶ್ವಿನ್ ಬಿಗ್ ಪ್ಲಾನ್


















