ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಬೆಂಗಳೂರು ನಲ್ಲಿ ಇರುವ ಕೇಂದ್ರೀಯ ರೇಷ್ಮೆ ಮಂಡಳಿ ಯಲ್ಲಿ ಖಾಲಿ ಇರುವ 17 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 17 ಡೆಪ್ಯಟೇಷನ್ ಆಧಾರದ ಅನ್ವಯ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ಹುದ್ದೆಯ ಹೆಸರು: ಕೇಂದ್ರೀಯ ರೇಷ್ಮೆ ಮಂಡಳಿ, ಬೆಂಗಳೂರು
ಹುದ್ದೆಗಳ ಸಂಖ್ಯೆ: 17
ಹುದ್ದೆ ಹೆಸರು: ಡೆಪ್ಯೂಟೇಷನ್ ಬೇಸ್ಡ್ ಹುದ್ದೆಗಳು
ಉದ್ಯೋಗ ಸ್ಥಳ: ಬೆಂಗಳೂರು, ಮೈಸೂರು ಸೇರಿ ದೇಶದ ಹಲವೆಡೆ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 11
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಸಂಖ್ಯಾಶಾಸ್ತ್ರದಲ್ಲಿ ಸ್ನಾತಕೋತ್ತರ, ಸಿಎ, ಎಂಬಿಎ ಪದವಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಇದಾದ ನಂತರ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 2.09 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ csb.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು
ಅರ್ಜಿ ಹಾಗೂ ದಾಖಲೆಗಳನ್ನು ಅಧಿಸೂಚನೆಯಲ್ಲಿ ತಿಳಿಸಿದ ವಿಳಾಸಕ್ಕೆ ಪೋಸ್ಟ್ ಮಾಡಬೇಕು.
ಇದನ್ನೂ ಓದಿ:ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ


















