ಬೆಂಗಳೂರು: ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ನಲ್ಲಿ (NRLM Karnataka Recruitment 2026) ಖಾಲಿ ಇರುವ 21 ಹುದ್ದೆಗಳ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 21 ಕ್ಲಸ್ಟರ್ ಸೂಪರ್ ವೈಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್
ಒಟ್ಟು ಹುದ್ದೆಗಳು: 57
ಹುದ್ದೆಗಳ ಹೆಸರು: ಕ್ಲಸ್ಟರ್ ಸೂಪರ್ ವೈಸರ್ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 28
ಜಿಲ್ಲಾ ವ್ಯವಸ್ಥಾಪಕರು, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು, ಕ್ಲಸ್ಟರ್ ಮೇಲ್ವಿಚಾರಕರು, ಬ್ಲಾಕ್ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಎಸ್ಸಿ, ಎಂಎಸ್ಸಿ, ಪಿಜಿ ಡಿಪ್ಲೋಮಾ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಗರಿಷ್ಠ 50 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಮೊದಲಿಗೆ https://jobsksrlps.karnataka.gov.in/ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಓದಬೇಕು
ಬಳಿಕ ಅರ್ಜಿಯ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಇದನ್ನೂ ಓದಿ:ಬೆಂಗಳೂರಿನಲ್ಲಿರುವ ರೇಷ್ಮೆ ಮಂಡಳಿಯಲ್ಲಿ 17 ಹುದ್ದೆಗಳ ನೇಮಕಾತಿ: 2 ಲಕ್ಷ ರೂ. ಸ್ಯಾಲರಿ


















