ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸಿಲ್ಕ್ ಮಾರ್ಕ್ ಆರ್ಗನೈಸೇಷನ್ ಆಫ್ ಇಂಡಿಯಾ (SMOI Young Professional Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 8 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 8 ಯಂಗ್ ಪ್ರೊಫೇಷನಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಸಿಲ್ಕ್ ಮಾರ್ಕ್ ಆರ್ಗನೈಸೇಷನ್ ಆಫ್ ಇಂಡಿಯಾ (SMOI)
ಹುದ್ದೆಗಳು: 8
ಹುದ್ದೆ ಹೆಸರು: ಯಂಗ್ ಪ್ರೊಫೇಷನಲ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 28
ಉದ್ಯೋಗ ಸ್ಥಳ: ಬೆಂಗಳೂರು ಸೇರಿ ದೇಶದ ಹಲವೆಡೆ
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಟೆಕ್ಸ್ ಟೈಲ್ ವಿಭಾಗದಲ್ಲಿ ಪದವಿ, ಡಿಪ್ಲೋಮಾ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂ. ಸಂಬಳ ನೀಡಲಾಗುತ್ತದೆ. ಕರ್ನಾಟಕದ ಬೆಂಗಳೂರಿನಲ್ಲಿ 2 ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ https://silkmarkrecruitment.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು.
ಇದನ್ನೂ ಓದಿ:ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ



















