ಬೆಂಗಳೂರು:ಕೆ ಆರ್ ಪುರದ ಮೇಡಹಳ್ಳಿ ಸಿಗ್ನಲ್ ಬಳಿ ಖಾಸಗಿ ಬಸ್ಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮಳೆ ಬಂದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿದ್ದು, ಈ ವೇಳೆ ಖಾಸಗಿ ಬಸ್ ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಬಸ್ ವ್ಯಕ್ತಿಯನ್ನು ಸುಮಾರು 100 ಮೀಟರ್ ವರೆಗೂ ಎಳೆದು ತಂದಿದೆ.
ಭೀಕರ ಅಪಘಾತದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



















