ಬಾಗಲಕೋಟೆ:ಜಿಲ್ಲೆಯ ಮುಧೋಳ ತಾಲೂಕಿನ ಪಿ.ಎಂ. ಬುದ್ನಿ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. 75 ವರ್ಷದ ವೃದ್ಧ ತಾಯಿಯನ್ನು ಮಕ್ಕಳು ಮನೆ ಹಿಂಬದಿಯ ದನದ ಕೊಟ್ಟಿಗೆಯಲ್ಲಿ ಇಟ್ಟಿದ್ದಾರೆ. ಬಿಸಿಲು, ಚಳಿ ಹಾಗೂ ವಿದ್ಯುತ್ ದೀಪವೂ ಇಲ್ಲದ ಕೊಟ್ಟಿಗೆಯಲ್ಲೇ ಅಜ್ಜಿ ಊಟ ಮಾಡಿಕೊಂಡು ವಾಸಿಸುತ್ತಿದ್ದರು. ಮನೆಯಲ್ಲಿ ಮಕ್ಕಳು, ಸೊಸೆಯಂದಿರು ಮತ್ತು ಮೊಮ್ಮಕ್ಕಳ ಜೊತೆ ಜಗಳವಾಡುತ್ತಿದ್ದರು ಎನ್ನುವ ಆರೋಪ ಇವರ ಮೇಲಿದೆ.
ಈ ಕುರಿತ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ವಿಷಯ ತಿಳಿಯುತ್ತಿದ್ದಂತೆ ಕಂದಾಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಸದ್ಯ ಕುಟುಂಬಸ್ಥರಿಗೆ ತಿಳುವಳಿಕೆ ಹೇಳಿರುವ ಅಧಿಕಾರಿಗಳು, ಅಜ್ಜಿಯನ್ನು ಸರಿಯಾಗಿ ನೋಡಿಕೊಳ್ಳುವಂತೆ ಎಚ್ಚರಿಕೆ ನೀಡಿದ್ದಾರೆ.



















