ಬೆಳಗಾವಿ:ಜಿಲ್ಲೆಯ ಅಥಣಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ರೈತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಮತ್ತು ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ರೈತರು ಜೇವರ್ಗಿ-ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಎಫ್ಆರ್ಪಿ (ಮತ್ತು ಎಮ್ಎಸ್ ಪಿ ದರ ನಿಗದಿಯಾಗಬೇಕು ಎಂದು ಆಗ್ರಹಿಸಿ ಈ ಪ್ರತಿಭಟನೆ ನಡೆಯುತ್ತಿದ್ದು, ರೈತರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.


















