ಬೆಂ.ಗ್ರಾಮಾಂತರ:ನೆಲಮಂಗಲದ ವೀರನಂಜಿಪುರದ ಬಳಿ ಭೀಕರ ಹಿಟ್ ಅಂಡ್ ರನ್ ಅಪಘಾತ ನಡೆದಿದ್ದು, ಕೇರಳದ 23 ವರ್ಷದ ಯುವತಿ ಅಲೀನಾ ಬಲಿಯಾಗಿದ್ದಾರೆ.ಇವರು ಸ್ನೇಹಿತನ ಜೊತೆ ಬೈಕ್ನಲ್ಲಿ ದೇವರಾಯನದುರ್ಗಕ್ಕೆ ರೈಡ್ ಹೋಗಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ.
ಅಪಘಾತದ ರಭಸಕ್ಕೆ ಬೈಕ್ ಹಿಂಬದಿ ಕುಳಿತಿದ್ದ ಅಲೀನಾ ಅವರ ತಲೆ ಮೇಲೆ ವಾಹನ ಹರಿದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















