ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, ಕಳೆದ ದಸರಾ ವೇಳೆ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ನ್ಯಾಯಾಧೀಶರಿಗೆ ಹಾಗೂ ತಕ್ಷಣ ಬಂಧಿಸಿದ ಪೊಲೀಸರಿಗೆ ಧನ್ಯವಾದ ತಿಳಿಸಿದ್ದಾರೆ. ಇದೇ ವೇಳೆ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರವಾಗಿ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಅವರ ವೈಯಕ್ತಿಕ ವಿಚಾರ ಚರ್ಚಿಸಿ ಚಾರಿತ್ರ್ಯ ವಧೆ ಮಾಡಬೇಡಿ. ಕೆಪಿಸಿಸಿ ಎಂದರೆ ರಾಜ್ಯದ ಸಿಡಿ ಪಾರ್ಟಿ ಎಂದು ಲೇವಡಿ ಮಾಡಿದ್ದಾರೆ.
ರಾಜ್ಯದಲ್ಲಿ ಬರಗಾಲ, ಸಾಲದ ಹೊರೆ, ಗೃಹಲಕ್ಷ್ಮಿ, ಯುವನಿಧಿ ಹಣ ಬಾರದಿರುವಿಕೆ ಹಾಗೂ ರಸ್ತೆಗಳ ದುಸ್ಥಿತಿ ಬಗ್ಗೆ ಚರ್ಚೆಯಾಗಲಿ. ಸರ್ಕಾರಿ ಹುದ್ದೆ ಭರ್ತಿಯಾಗಿಲ್ಲ, ಹುಟ್ಟುವ ಮಗುವಿನ ಮೇಲೆಯೂ ಸಾಲದ ಹೊರೆ ಇದೆ ಎಂದು ಪ್ರತಾಪ್ ಸಿಂಹ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.



















