ವಿಜಯದಶಮಿ ಹಾಗೂ ಆಯುಧ ಪೂಜೆ ಹಬ್ಬಕ್ಕೆ ಖರೀದಿ ಜೋರಾಗಿದೆ. ಪ್ರಮುಖ ಮಾರುಕಟ್ಟೆಗಳಲ್ಲಿ ಬೆಳ್ಳಂಬೆಳಗ್ಗೆ ಖರೀದಿ ಭರಾಟೆ ಆರಂಭವಾಗಿದೆ. ಹೂವು, ಹಣ್ಣು ಮತ್ತು ತರಕಾರಿ ವ್ಯಾಪಾರ ಬಲು ಜೋರಾಗಿ ನಡೆಯುತ್ತಿದೆ. ಕೆ.ಆರ್.ಮಾರ್ಕೆಟ್ನಲ್ಲಿ ಗ್ರಾಹಕರು ಭರ್ಜರಿ ಖರೀದಿ ನಡೆಸುತ್ತಿದ್ದಾರೆ. ಆಯುಧ ಪೂಜೆ ದಿನ ಬೆಲೆ ಹೆಚ್ಚಾಗುವ ಕಾರಣ ಈಗಲೇ ಖರೀದಿ ಮಾಡುತ್ತಿದ್ದಾರೆ. ಆದರೂ ಜನ ಬೆಲೆ ಏರಿಕೆಗೆ ತತ್ತರಿಸಿ ಹೋಗುತ್ತಿದ್ದಾರೆ.
ಜನರು ಹೂವು, ಹಣ್ಣು, ನಿಂಬೆಹಣ್ಣು, ಕುಂಬಳಕಾಯಿ, ಬಾಳೆಕಂದು ಹಾಗೂ ಇತರೆ ಪೂಜಾ ಸಾಮಾಗ್ರಿಗಳನ್ನು ಖರೀದಿಸುತ್ತಿದ್ದಾರೆ. ಹಬ್ಬದ ಖರೀದಿಯ ಹಿನ್ನೆಲೆಯಲ್ಲಿ ಕೆ.ಆರ್.ಮಾರ್ಕೆಟ್ ಸುತ್ತಮುತ್ತ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ.


















