ಹನೂರು ತಾಲೂಕಿನ ಗುಂಡಾಪುರ ಅರಣ್ಯ ಪ್ರದೇಶದ ಕಾಡಂಚಿನಲ್ಲಿ ಕುರಿ ಮೇಯಿಸುತ್ತಿದ್ದ ವೇಳೆ ಕುರಿಗಾಯಿ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ದಾಳಿಯಿಂದಾಗಿ ಗುಂಡಾಪುರದ ಕುರಿಗಾಯಿ ಚಿನ್ನರಾಜು ಅವರ ಮುಖ, ಹಣೆ ಹಾಗೂ ಕೈ-ಕಾಲುಗಳಿಗೆ ತೀವ್ರ ಗಾಯಗಳಾಗಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಿರತೆ ದಾಳಿ ನಡೆಸುತ್ತಿದ್ದಂತೆ ಚಿನ್ನರಾಜು ಜೋರಾಗಿ ಬೊಬ್ಬೆ ಹಾಕಿದ್ದಾರೆ. ಇವರ ಬೊಬ್ಬೆ ಕೇಳಿ ಚಿರತೆ ಸ್ಥಳದಿಂದ ಪರಾರಿಯಾಗಿದ್ದು, ಚಿನ್ನರಾಜು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.



















