ಮಾಗಡಿ-ಕುಣಿಗಲ್ ಮುಖ್ಯ ರಸ್ತೆಯಲ್ಲಿ ಬೋರ್ವೆಲ್ ಲಾರಿ ಆಯತಪ್ಪಿ ಪಲ್ಟಿಯಾಗಿದೆ. ಮಾಗಡಿಯ ಸೋಮೇಶ್ವರ ಕಾಲೋನಿ ಬಳಿ ಈ ಘಟನೆ ನಡೆದಿದೆ. ಕೆಶಿಪ್ ರಸ್ತೆ ಕಾಮಗಾರಿಯಿಂದ ರಸ್ತೆಯಲ್ಲಿ ಬಿದ್ದಿದ್ದ ಭಾರಿ ಪ್ರಮಾಣದ ಗುಂಡಿಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಗುಂಡಿಯಿಂದಾಗಿ ಆಯತಪ್ಪಿ ಬೋರ್ವೆಲ್ ಕೊರೆಯುವ ಲಾರಿ ರಸ್ತೆಯಲ್ಲೇ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಮೂಲಕ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ಈ ಘಟನೆ ಸಂಭವಿಸಿದೆ.



















