ಇಂದು ಮತ್ತು ನಾಳೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಅಲರ್ಟ್ ಘೋಷಿಸಲಾಗಿದೆ. ಹಿಂಗಾರು ಚುರುಕಾಗಿರುವ ಹಿನ್ನೆಲೆಯಲ್ಲಿ ಒಟ್ಟು 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ವರುಣನ ಆರ್ಭಟ ಹೆಚ್ಚಾಗಲಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ.
ಇಂದು ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ನಾಳೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.


















