ಬೆಂಗಳೂರು: ದೇಶದ ರೈತರಿಗೆ ಅನುಕೂಲವಾಗಲಿ ಎಂದು ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೆ ತಂದಿದೆ. ಇದರ ಅನ್ವಯ ವರ್ಷದಲ್ಲಿ ಮೂರು ತಲಾ 2 ಸಾವಿರ ರೂಪಾಯಿಯನ್ನು ರೈತರ ಖಾತೆಗಳಿಗೆ ಜಮೆ ಮಾಡಲಾಗುತ್ತದೆ. ಈಗ ಯೋಜನೆಯ 24ನೇ ಕಂತಿನ 2 ಸಾವಿರ ರೂಪಾಯಿಗಾಗಿ ರೈತರು ಕಾಯುತ್ತಿದ್ದಾರೆ. ಮೂಲಗಳ ಪ್ರಕಾರ, ಕೇಂದ್ರ ಸರ್ಕಾರವು ದೀಪಾವಳಿಗೆ ಮೊದಲೇ ರೈತರ ಖಾತೆಗಳಿಗೆ ಹಣ ಜಮೆ ಮಾಡಲಿದೆ ಎಂದು ತಿಳಿದುಬಂದಿದೆ.
ಕರ್ನಾಟಕದ ರೈತರು ಸೇರಿ ದೇಶದ 9 ಕೋಟಿಗೂ ಅಧಿಕ ಅನ್ನದಾತರ ಖಾತೆಗಳಿಗೆ ಹಣ ಜಮೆಯಾಗಲಿದೆ. 2025ರ ನವೆಂಬರ್ 19ರಂದು ಕೇಂದ್ರ ಸರ್ಕಾರ 21ನೇ ಕಂತಿನ ಹಣವನ್ನು ಜಮೆ ಮಾಡಿತ್ತು. ಹಾಗಾಗಿ, ಈ ಬಾರಿಯೂ ನವೆಂಬರ್ ನಲ್ಲಿ ಹಣ ಜಮೆಯಾಗಲಿದೆ ಎಂದು ಹೇಳಲಾಗುತ್ತಿದೆ. ಇನ್ನು, ರೈತರ ಖಾತೆಗಳಿಗೆ ಹಣ ಜಮೆಯಾಗಲು ಇ-ಕೆವೈಸಿ ಕಡ್ಡಾಯಗೊಳಿಸಲಾಗಿದೆ. ಹಾಗಾಗಿ, ರೈತರು ಈ ಮಾರ್ಗಗಳನ್ನು ಅನುಸರಿಸುವ ಮೂಲಕ ಇ-ಕೆವೈಸಿ ಪೂರ್ಣಗೊಳಿಸಬಹುದು.
ಆನ್ ಲೈನ್ ಮೂಲಕ ಇ-ಕೆವೈಸಿ ಮಾಡುವುದು ಹೇಗೆ?
• ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ ಸೈಟ್ pmkisan.gov.in ಗೆ ಭೇಟಿ ನೀಡಿ.
• ವೆಬ್ ಸೈಟ್ ಮುಖಪುಟದ ಬಲಭಾಗದಲ್ಲಿರುವ ‘Farmers Corner’ ವಿಭಾಗದಲ್ಲಿ ‘e-KYC’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
• ಹೊಸ ಪುಟ ತೆರೆಯುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಕ್ಯಾಪ್ಚಾ ಕೋಡ್ (Captcha Code) ಹಾಕಿ ‘Search’ ಮೇಲೆ ಕ್ಲಿಕ್ ಮಾಡಿ.
• ನಿಮ್ಮ ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ‘Get Mobile OTP’ ಮೇಲೆ ಕ್ಲಿಕ್ ಮಾಡಿ.
• ನಿಮ್ಮ ಮೊಬೈಲ್ ಗೆ ಬರುವ 4 ಅಂಕಿಯ OTP ಸಂಖ್ಯೆಯನ್ನು ನಮೂದಿಸಿ ‘Submit for OTP’ ಮೇಲೆ ಕ್ಲಿಕ್ ಮಾಡಿ.
• ನಂತರ ಮತ್ತೊಮ್ಮೆ ‘Get Aadhaar OTP’ ಬಟನ್ ಬರುತ್ತದೆ, ಅದನ್ನು ಕ್ಲಿಕ್ ಮಾಡಿ ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ಗೆ ಬರುವ ಮತ್ತೊಂದು OTP ನಮೂದಿಸಿ ಸಲ್ಲಿಸಿದರೆ ನಿಮ್ಮ e-KYC ಯಶಸ್ವಿಯಾಗಿ ಪೂರ್ಣಗೊಳ್ಳುತ್ತದೆ.
ಆಫ್ ಲೈನ್ ಮೂಲಕ ಹೇಗೆ?
ನಿಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಿ. ಅಲ್ಲಿ ಬಯೋಮೆಟ್ರಿಕ್ (ಬೆರಳಚ್ಚು ಅಥವಾ ಕಣ್ಣಿನ ಗುರುತು) ಮೂಲಕ ಸುಲಭವಾಗಿ ಇ-ಕೆವೈಸಿ ಮಾಡಿಕೊಡುತ್ತಾರೆ. ನಿಮ್ಮ ಸ್ಥಳೀಯ ಕೃಷಿ ಇಲಾಖೆ ಕಚೇರಿಯ ಸಹಾಯ ಕೇಂದ್ರದಲ್ಲೂ ಇದನ್ನು ಮಾಡಿಸಿಕೊಳ್ಳಬಹುದು. ಹೋಗುವಾಗ ನಿಮ್ಮ ಆಧಾರ್ ಕಾರ್ಡ್ ಮತ್ತು ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ಜತೆಯಲ್ಲಿಟ್ಟುಕೊಳ್ಳಿ.



















