ಬೆಂಗಳೂರು: ನೀವೇನಾದರೂ ಎಸ್ಸೆಸ್ಸೆಲ್ಸಿ, ಬಿಎಎಂಎಸ್, ಎಂಡಿ ಮುಗಿಸಿ, ಸರ್ಕಾರದ ಹುದ್ದೆ ಪಡೆಯಬೇಕು ಎಂದು ಕನಸು ಕಾಣುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಹೌದು, ಹಾಸನದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ (DHFWS Hassan Recruitment 2026) ಖಾಲಿ ಇರುವ 24 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಸನ
ಹುದ್ದೆ ಹೆಸರು: ಸ್ಪೆಷಲಿಸ್ಟ್ ಡಾಕ್ಟರ್ ಇತ್ಯಾದಿ
ಒಟ್ಟು ಹುದ್ದೆ: 24
ಉದ್ಯೋಗ ಸ್ಥಳ: ಹಾಸನ, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 5
ಸ್ಪೆಷಲಿಸ್ಟ್ ಡಾಕ್ಟರ್, ಫಾರ್ಮಾಸಿಸ್ಟ್, ಸ್ಟಾಫ್ ನರ್ಸ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ, ಬಿಎಎಂಎಸ್, ಎಂಎಸ್, ಎಂಡಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 57 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ hassan.nic.in ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು. ಹಾಸನ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಬೇಕಾದ ವಿಳಾಸ
Member Secretary / District AYUSH Officers, District AYUSH Officer’s Office, Hossallin Road, Hassan – 573201.
ಇದನ್ನೂ ಓದಿ:ವರ್ಷದಲ್ಲಿ ಬ್ಯಾಂಕ್ ಖಾತೆಗೆ 10 ಲಕ್ಷ ರೂ.ಗಿಂತ ಹೆಚ್ಚು ಜಮೆಯಾದರೆ ಏನಾಗುತ್ತದೆ? ನಿಯಮ ತಿಳಿಯಿರಿ



















