ಬೆಂಗಳೂರು: ಸರ್ಕಾರಿ ಸ್ವಾಮ್ಯದ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 1 ಹುದ್ದೆಗಳ ನೇಮಕಾತಿಗಾಗಿ (NLSIU Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿರುವ ವಿಶ್ವವಿದ್ಯಾಲಯದಲ್ಲಿ ಲೈಬ್ರರಿ ಟ್ರೈನಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ವಿಶ್ವವಿದ್ಯಾಲಯ
ಒಟ್ಟು ಹುದ್ದೆಗಳು: 1
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 9
ಹುದ್ದೆಗಳ ಹೆಸರು: ಲೈಬ್ರರಿ ಟ್ರೈನಿ
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳಿಗೆ ಸಂದರ್ಶನದ ದಿನಾಂಕವನ್ನು ಇ-ಮೇಲ್ ಮೂಲಕ ತಿಳಿಸಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ nls.ac.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು.
ಇದನ್ನೂ ಓದಿ:ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 24 ಹುದ್ದೆಗಳ ನೇಮಕಾತಿ: 57 ಸಾವಿರ ರೂ. ಸಂಬಳ



















