ವಿಧಾನಪರಿಷತ್ನ ಒಟ್ಟು 4 ಸ್ಥಾನಗಳಿಗೆ ಇಂದು ಮತದಾನ ಪ್ರಕ್ರಿಯೆ ನಡೆಯುತ್ತಿದೆ. 2 ಪದವೀಧರ ಮತ್ತು 2 ಶಿಕ್ಷಕರ ಕ್ಷೇತ್ರಗಳ ಸ್ಥಾನಗಳಿಗೆ ಈಗಾಗಲೇ ವೋಟಿಂಗ್ ಪ್ರಕ್ರಿಯೆ ಆರಂಭವಾಗಿದೆ. ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಪಶ್ಚಿಮ ಪದವೀಧರರ ಕ್ಷೇತ್ರ ಹಾಗೂ ಆಗ್ನೇಯ ಪದವೀಧರರ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಒಟ್ಟು 43 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಶಾಂತಿಯುತ ಮತದಾನಕ್ಕಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಇದನ್ನೂ ಓದಿ:ಕಾನೂನು ವಿಶ್ವವಿದ್ಯಾಲಯದಲ್ಲಿ ಲೈಬ್ರರಿ ಟ್ರೈನಿ ಹುದ್ದೆಯ ನೇಮಕ: ಕೂಡಲೇ ಅರ್ಜಿ ಸಲ್ಲಿಸಿ


















