ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ. ಕಾಂಗ್ರೆಸ್ ಪಾಳಯದಲ್ಲಿ ಕಿಚ್ಚು ಹಚ್ಚಿರುವ ಮತ್ತು ದಿನೇ ದಿನೆ ತಾರಕಕ್ಕೇರುತ್ತಿರುವ ಸ್ಟಿಂಗ್ ಆಪರೇಷನ್ ಕಿಡಿಯ ಕುರಿತು ಹೈಕಮಾಂಡ್ ಜೊತೆ ನಾಯಕರು ಚರ್ಚಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರಿಗೆ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಖಾಲಿ ಇರುವ ಸಚಿವ ಸ್ಥಾನ ಭರ್ತಿ ಮಾಡುವ ಬಗ್ಗೆಯೂ ಚರ್ಚೆ ನಡೆದಿದ್ದು, ಹೈಕಮಾಂಡ್ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಮಹಿಳಾ ಕೋಟಾದಡಿ ಸಚಿವ ಸ್ಥಾನ ಭರ್ತಿ ಮಾಡಲು ಹೈಕಮಾಂಡ್ ಸೂಚನೆ ನೀಡಿದ್ದು, ಮಹಿಳಾ ಸಚಿವರಲ್ಲಿ ಚಟುವಟಿಕೆ ಮತ್ತು ಒತ್ತಡ ಗರಿಗೆದರಿದೆ. ಇದೇ ವೇಳೆ ನಿಗಮ ಮಂಡಳಿ ಭರ್ತಿಗೆ 500 ಹೆಸರುಗಳ ಅಂತಿಮ ಪಟ್ಟಿ ಸಿದ್ಧಪಡಿಸಲಾಗಿದ್ದು, ಎಂಎಲ್ಸಿ ಚುನಾವಣೆ ಮುಗಿಯುತ್ತಿದ್ದಂತೆ ನೇಮಕ ಪ್ರಕ್ರಿಯೆ ಆರಂಭವಾಗಲಿದೆ.



















