ಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿಯಾಗಿ ಮೇಕೆದಾಟು ಡ್ಯಾಂ ಮತ್ತು ಕುಡಿಯುವ ನೀರು ಯೋಜನೆಗೆ ಶೀಘ್ರ ಅನುಮೋದನೆ ನೀಡುವಂತೆ ಮನವಿ ಸಲ್ಲಿಸಿದ್ದಾರೆ. ಮೇಕೆದಾಟು ಯೋಜನೆಯ ಭೂ ತಾಂತ್ರಿಕ ಸಮೀಕ್ಷೆಗಾಗಿ 20 ಬೋರ್‌ವೆಲ್ ಕೊರೆಯಲು ಅನುಮತಿ ನೀಡಬೇಕು ಹಾಗೂ 2 ಸಾವಿರ ಮೆಗಾವ್ಯಾಟ್ ಸಾಮರ್ಥ್ಯದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ಪರಿಶೀಲಿಸಿ ಒಪ್ಪಿಗೆ ನೀಡಬೇಕು ಎಂದು ಕೋರಿದ್ದಾರೆ.
ಭೌತಿಕ ಸಮೀಕ್ಷೆ ಪೂರ್ಣಗೊಳ್ಳುವವರೆಗೆ ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆ ಹೊರಡಿಸಬಾರದು ಎಂದು ಒತ್ತಾಯಿಸಿದ್ದಾರೆ. ಇದೇ ವೇಳೆ ಕಂದಾಯ ದಾಖಲೆಗಳು ಹಾಗೂ ಉಪಗ್ರಹ ಚಿತ್ರಗಳ ಮೂಲಕ ಪರಿಶೀಲನೆ ನಡೆಸಿ, ಗೋವಾ ಮತ್ತು ಕೇರಳ ಮಾದರಿಯಲ್ಲಿ ಕರ್ನಾಟಕದ ಕರಾವಳಿ ನಿಯಂತ್ರಣ ವಲಯ ನಿಯಮಗಳನ್ನು ಸಡಿಲಿಸಬೇಕು ಎಂದು ಆಗ್ರಹಿಸಿದ್ದಾರೆ.



















