ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪಿಸುವ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ನಾನು ಮುಖ್ಯಮಂತ್ರಿ ಅನ್ನೋದನ್ನ ಕುಮಾರಸ್ವಾಮಿ ಅವರಿಗೆ ಒಪ್ಪಿಕೊಳ್ಳೋಕೆ ಆಗ್ತಿಲ್ಲ. ಆದ್ರೂ ಮಾನ್ಯ ಮುಖ್ಯಮಂತ್ರಿಗಳೇ ಅಂತ ಪತ್ರ ಬರೆದಿದ್ದಾರೆ” ಎಂದು ಲೇವಡಿ ಮಾಡಿದ್ದಾರೆ. ಕುಮಾರಸ್ವಾಮಿ ಅವರು ಪತ್ರ ಬರೆದಿರುವ ವಿಷಯ ತಮಗೆ ಈಗಷ್ಟೇ ಗೊತ್ತಾಗಿದ್ದು, ಈ ಬಗ್ಗೆ ಚರ್ಚಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.



















