ರಾಜ್ಯದಲ್ಲಿ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆ ಇಂದು ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ.
ಇದರ ಹೊರತಾಗಿಯೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಎಚ್ಚರಿಸಲಾಗಿದ್ದು, ರಾಜಧಾನಿ ಬೆಂಗಳೂರಿನಲ್ಲೂ ಮಳೆ ಮುಂದುವರಿಯಲಿದೆ.



















