ಬಿಜೆಪಿ ರಾಜ್ಯ ಕಾರ್ಯದರ್ಶಿ ತಮ್ಮೇಶಿ ಗೌಡ ಅವರ ನೇತೃತ್ವದಲ್ಲಿ ಬ್ಯಾಟರಾಯನಪುರ ದಸರಾ ಉತ್ಸವ–2026 ಅದ್ಧೂರಿಯಾಗಿ ನಡೆಯುತ್ತಿದೆ. ಅಕ್ಟೋಬರ್ 22ರಿಂದ 25ರವರೆಗೆ ನಾಲ್ಕು ದಿನಗಳ ಕಾಲ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅಕ್ಟೋಬರ್ 22ರ ಗುರುವಾರ ಸಂಜೆ ದಸರಾ ಉತ್ಸವಕ್ಕೆ ಅಧಿಕೃತ ಚಾಲನೆ ನೀಡಲಾಗಿದ್ದು, ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಹಿರಿಯ ಕಾರ್ಯಕರ್ತರಿಗೆ ಸನ್ಮಾನ ಮಾಡಲಾಗಿದೆ. ಇದರೊಂದಿಗೆ ದೊಡ್ಡಬೊಮ್ಮಸಂದ್ರ ಮತ್ತು ಸಿಂಗಾಪುರ ವಾರ್ಡ್ಗಳ ಸಾಧಕರಿಗೂ ಗೌರವ ಸಲ್ಲಿಸಲಾಗುತ್ತಿದೆ.
ಅ.22ರ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಸೇರಿದಂತೆ ಹಲವು ಗಣ್ಯರು ಹಾಗೂ ಸಿನಿಮಾ ತಾರೆಯರು ಭಾಗವಹಿಸಿದ್ದರು. ಭಜನೆ ಮತ್ತು ಸಂಗೀತ ಕಾರ್ಯಕ್ರಮಗಳ ಮೂಲಕ ಬ್ಯಾಟರಾಯನಪುರದಲ್ಲಿ ದಸರಾ ಸಂಭ್ರಮ ಮನೆಮಾಡಿದೆ. ಅ.23ರಂದು ಭಜನಾ ಸ್ಪರ್ಧೆ ಹಾಗೂ ಬಾಗಿನ ಕೊಡುವ ಕಾರ್ಯಕ್ರಮ ನಿಗದಿಯಾಗಿದೆ. ಅ.24ರಂದು ಯುವ ದಸರಾ ಮತ್ತು ಸಂಗೀತ ಕಾರ್ಯಕ್ರಮಗಳು ನಡೆಯಲಿದ್ದು, ಅಕ್ಟೋಬರ್ 25ರಂದು ವಿಜಯದಶಮಿ ಹಾಗೂ ಶ್ರೀಶಕ್ತಿ ಭಾರತ್ ಕಾರ್ಯಕ್ರಮಗಳೊಂದಿಗೆ ನಾಲ್ಕು ದಿನಗಳ ಉತ್ಸವಕ್ಕೆ ತೆರೆ ಬೀಳಲಿದೆ.


















