ಪೋಲೆಂಡ್ ಪ್ರಧಾನ ಮಂತ್ರಿ ಡೊನಾಲ್ಡ್ ಟಸ್ಕ್ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಪೋಲೆಂಡ್‌ನ ವಿತ್ತ ಸಚಿವ ಆಂಡ್ರೇಜ್ ಡೊಮ್ಯಾನ್ಸ್ಕಿ, ಪೋಲೆಂಡ್ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇವರೊಂದಿಗೆ ಕರ್ನಾಟಕದ ಭಾರಿ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್, ಐಟಿ, ಬಿಟಿ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್ ಮತ್ತಿತರರು ಭಾಗವಹಿಸಿದ್ದರು.


















