ಬೆಳಗಾವಿ: 202ನೇ ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಐತಿಹಾಸಿಕ ಕಿತ್ತೂರು ಕೋಟೆ ಆವರಣಕ್ಕೆ ಚೆನ್ನಮ್ಮ ವಿಜಯಜ್ಯೋತಿ ಆಗಮಿಸಿದೆ. ಕೋಟೆ ಆವರಣ ತಲುಪಿದ ವಿಜಯಜ್ಯೋತಿಯನ್ನು ಶಾಸಕ ಬಾಬಾಸಾಹೇಬ್ ಪಾಟೀಲ್, ಮಹಾಂತೇಶ ಕೌಜಲಗಿ ಹಾಗೂ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೇರಿದಂತೆ ಹಲವು ಗಣ್ಯರು ಸ್ವಾಗತಿಸಿದರು.
ಇದೇ ಸಂದರ್ಭದಲ್ಲಿ ಸಾಂಪ್ರದಾಯಿಕ ಜಾನಪದ ಕಲಾ ತಂಡಗಳ ಭವ್ಯ ಮೆರವಣಿಗೆ ಉತ್ಸವದ ಮೆರಗನ್ನು ಹೆಚ್ಚಿಸಿವೆ. ಇಂದು ಸಂಜೆ 7 ಗಂಟೆಗೆ ಕಿತ್ತೂರು ಉತ್ಸವದ ಅಧಿಕೃತ ಉದ್ಘಾಟನಾ ಸಮಾರಂಭ ನೆರವೇರಲಿದೆ.
















