ದೊಡ್ಡಬಳ್ಳಾಪುರದಿಂದ ದೇವನಹಳ್ಳಿಗೆ ಹೋಗುವ ಮಾರ್ಗ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಗುದ್ದಿದ ಪರಿಣಾಮ ದಂಪತಿ ಸಾವನ್ನಪ್ಪಿದ್ದಾರೆ. ತವರುಮನೆ ಅಂಬಲಗೆರೆಗೆ ಹೋಗಿ ವಾಪಸ್ ಆಗುತ್ತಿದ್ದ ದಂಪತಿ ದೇವನಹಳ್ಳಿಯಲ್ಲಿ ವಾಸವಾಗಿದ್ದರು. ಮುನಿರಾಜ್ (40) ಮತ್ತು ರೇಣುಕಾ (35) ಮೃತ ದುರ್ದೈವಿಗಳು.
ಡಿಕ್ಕಿಯ ರಭಸಕ್ಕೆ ರೇಣುಕಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಿಸದೆ ಮುನಿರಾಜ್ ಮೃತಪಟ್ಟಿದ್ದಾರೆ. ಮೃತದೇಹವನ್ನು ದೊಡ್ಡಬಳ್ಳಾಪುರದ ಶವಾಗಾರಕ್ಕೆ ರವಾನಿಸಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



















