ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಮುಂದಿನ ಮೂರ್ನಾಲ್ಕು ದಿನ ರಾಜ್ಯದಲ್ಲಿ ಜೋರು ಮಳೆಯಾಗಲಿದೆ. ಅಂಡಮಾನ್ ಬಳಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತವಾಗಲಿದೆ.
ಅಕ್ಟೋಬರ್ 24 ಅಥವಾ 25ರಂದು ಆಂಧ್ರ ಕರಾವಳಿಗೆ ಚಂಡಮಾರುತ ಅಪ್ಪಳಿಸಲಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಮತ್ತು ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಮೀನುಗಾರರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮುಂಗಾರು ಕೊರತೆ ಎದುರಿಸಿದ್ದ ರಾಜ್ಯಕ್ಕೆ ಹಿಂಗಾರು ಕೊಂಚ ನೆಮ್ಮದಿ ತಂದಿದೆ.



















