ಬೆಂಗಳೂರು:ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ನಟ ಧನ್ವೀರ್ ವಿರುದ್ಧ ಚೀಟಿಂಗ್ ಕೇಸ್ ದಾಖಲಾಗಿದೆ. ಗೌರವ್ ಖಾಟೇರ್ ಎಂಬುವವರು ನೀಡಿದ ದೂರಿನ ಅನ್ವಯ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದಾರೆ. ಫ್ಲೈಟ್ ಟಿಕೆಟ್ ಬುಕ್ ಮಾಡಿಸಿ 5 ಲಕ್ಷಕ್ಕೂ ಹೆಚ್ಚು ಹಣ ನೀಡದ ಹಾಗೂ ಸ್ನೇಹಿತನಿಗೆ ಕಾರು ಕೊಡಿಸಿ ಅದನ್ನು ವಾಪಸ್ ನೀಡದ ಆರೋಪ ಧನ್ವೀರ್ ಮೇಲಿದೆ.
ನಿನ್ನೆ ಗೌರವ್ ಖಾಟೇರ್ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಬ್ಯಾಟರಾಯನಪುರ ಪೊಲೀಸರು ಇಂದು ವಿಚಾರಣೆ ನಡೆಸಲಿದ್ದಾರೆ. ಮೌಖಿಕವಾಗಿ ವಿಚಾರಣೆಗೆ ಹಾಜರಾಗುವಂತೆ ನಟ ಧನ್ವೀರ್ಗೆ ಪೊಲೀಸರು ಸೂಚನೆ ನೀಡಿದ್ದು, ತನಿಖೆ ಮುಂದುವರಿಸಿದ್ದಾರೆ.


















