ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ರೈತ ಸ್ಪಂದನ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಪಕ್ಷದ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದ್ದಾರೆ.
ಇದೇ ವೇಳೆ ಕಾರ್ಯಕರ್ತರು “ಮುಂದಿನ ಮುಖ್ಯಮಂತ್ರಿ ಬಿ.ವೈ.ವಿಜಯೇಂದ್ರ ಅವರಿಗೆ ಜೈ” ಎಂದು ಭರ್ಜರಿ ಜಯಘೋಷಣೆಗಳನ್ನು ಕೂಗಿದ್ದಾರೆ. ಈ ಘೋಷಣೆಗಳು ಮೊಳಗುತ್ತಿದ್ದಂತೆ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಕಾರ್ಯಕರ್ತರಿಗೆ ಕೈಮುಗಿದು ಧನ್ಯವಾದ ಅರ್ಪಿಸಿದ್ದಾರೆ.


















