ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ದೇಶದ ನವರತ್ನ ಸಂಸ್ಥೆಗಳಲ್ಲಿ ಒಂದಾಗಿರುವ ಸೆಂಟ್ರಲ್ ವೇರ್ ಹೌಸಿಂಗ್ ಕಾರ್ಪೊರೇಷನ್ (CWC Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 327 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಸೆಂಟ್ರಲ್ ವೇರ್ ಹೌಸಿಂಗ್ ಕಾರ್ಪೊರೇಷನ್ (CWC)
ಒಟ್ಟು ಹುದ್ದೆಗಳು: 327
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಉದ್ಯೋಗ ಸ್ಥಳ: ದೇಶಾದ್ಯಂತ
ಹುದ್ದೆಯ ಹೆಸರು: ಅಸಿಸ್ಟಂಟ್ ಮ್ಯಾನೇಜರ್ ಇತ್ಯಾದಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 15
ಅಸಿಸ್ಟಂಟ್ ಮ್ಯಾನೇಜರ್ ಹಾಗೂ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಎಸ್ಸಿ, ಬಿ.ಟೆಕ್, ಬಿ.ಇ, ಸ್ನಾತಕೋತ್ತರ ಪದವಿ, ಎಂಬಿಎ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18ರಿಂದ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 1.4 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ https://www.cwceportal.com/ ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.



















